ರೈಲ್ವೇ ಬಜೆಟ್‌ನಲ್ಲಿ ಲಾಲು ಮಲತಾಯಿ ಧೋರಣೆಯನ್ನು ಮುಂದುವರಿಸಿದ್ದು, ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದರು. ರಾಜ್ಯಕ್ಕೆ ಒಂಬತ್ತು ಯೋಜನೆಗಳ ಬಗ್ಗೆ ಪ್ರಸ್ತಾಪ ಸಲ್ಲಿಸಲಾಗಿತ್ತು. ಆದರೆ ಎರಡನ್ನು ಮಾತ್ರ ಮಂಜೂರು ಮಾಡಿದ್ದಾರೆ ಎಂದು ಲಾಲು ವಿರುದ್ಧ ಹೇಳಿಕೆ ನೀಡಿದ್ದಾರೆ. |