ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕ ಮಂಡಳಿಯ ಸಭೆ ಇಂದಿನಿಂದ ಆರಂಭವಾಗಲಿದೆ ಎಂದು ಬ್ಯಾಂಕ್‌ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಆರ್ಥಿಕ ಕುಸಿತ ಹಾಗೂ ಆರ್ತಿಕ ಕುಸಿತ ತಡೆಗೆ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಚರ್ಚಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ನಿರ್ದೇಶಕ ಬಿ.ಶ್ರೀನಿವಾಸ್ ತಿಳಿಸಿದ್ದಾರೆ.
ಆರ್ಥಿಕ ಬಿಕ್ಕಟ್ಟು ನಿವಾರಣೆಯಲ್ಲಿ ಬ್ಯಾಂಕ್‌ಗಳ ಹಾಗೂ ಸರಕಾರದ ಪಾತ್ರ ಬಹುಮುಖ್ಯವಾಗಿದ್ದು, ಉದ್ಯೋಗಗಳು ಕಡಿತವಾಗದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. |