ಜಾಗತಿಕ ಹಿಂಜರಿತದ ಹೊಡೆತಕ್ಕೆ ಒಳಗಾದ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳಿಗೆ ಸಾಲ ವಿತರಣೆ ಹೆಚ್ಚಿಸದಿದ್ದರೆ ಖಾಸಗಿ ಮತ್ತು ವಿದೇಶಿ ಬ್ಯಾಂಕುಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಕಾರ್ಯದರ್ಶಿ ಜಿ.ಕೆ.ಪಿಳ್ಳೈ ತಿಳಿಸಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನ ಪಾಲಿಸದಿದ್ದರೆ, ಸರ್ಕಾರವೇ ಮುಂದಾಗಿ ಕ್ರಮ ಕೈಗೊಳ್ಳವುದು ಎಂದು ಐಎಂಎಸ್‌ಎಂಇ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
ಖಾಸಗಿ ಬ್ಯಾಂಕುಗಳು ಗ್ರಾಹಕ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿವೆ, ಆದರೆ ಪರಿಸ್ಥಿತಿ ಕಠಿಣವಾದ ಸಂದರ್ಭದಲ್ಲೇ ಅವು ಸಣ್ಣ ಕೈಗಾರಿಕೆಗಳನ್ನು ನಿರ್ಲಕ್ಷಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. |