ದೋಹಾ : ಒಪೆಕ್ ಸಂಸ್ಥೆ ತೈಲ ಮಾರುಕಟ್ಟೆಯ ಏರಿಳಿಕೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ,ಮುಂದಿನ ತಿಂಗಳು ನಡೆಯಲಿರುವ ಸಭೆಯಲ್ಲಿ ತೈಲ ಉತ್ಪಾದನೆಯನ್ನು ಕಡಿತಗೊಳಿಸುವ ಸಾಧ್ಯತೆಗಳಿವೆ ಎಂದು ಕತಾರ್‌ನ ಇಂಧನ ಅಧಿಕಾರಿಗಳು ತಿಳಿಸಿದ್ದಾರೆ.
ತೈಲ ದರ ಕುಸಿತದಿಂದಾಗಿ ಒಪೆಕ್ ಸಂಸ್ಥೆ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಕತಾರ್‌ನ ಇಂಧನ ಮತ್ತು ಕೈಗಾರಿಕೆ ರಾಜ್ಯ ಸಚಿವ ಮೊಹಮ್ಮದ್ ಸಲೇಹ್ ಅಲ್-ಸದಾ ತಿಳಿಸಿದ್ದಾರೆ.
ದೋಹಾದಲ್ಲಿ ನಡೆದ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಲ್-ಸಾದಾ ತೈಲ ದರಗಳು ಮತ್ತಷ್ಟು ಕುಸಿತವಾದಲ್ಲಿ ತೈಲ ಉತ್ಪಾದನೆಯನ್ನು ಕಡಿತಗೊಳಿಸಲಾಗುತ್ತದೆ ಎಂದು ನುಡಿದರು.
ಕಳೆದ ಜುಲೈ ತಿಂಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ 147 ಡಾಲರ್ ದರ ಏರಿಕೆ ಕಂಡಿದ್ದು, ಪ್ರಸಕ್ತ ಸಂದರ್ಭದಲ್ಲಿ ಪ್ರತಿ ಬ್ಯಾರೆಲ್‌ಗೆ 34 ಡಾಲರ್‌ಗಳಿಗೆ ಇಳಿಕೆಯಾಗಿದೆ. |