ಏಷ್ಯಾ ಶೇರುಪೇಟೆಗಳ ದುರ್ಬಲ ವಹಿವಾಟಿನಿಂದಾಗಿ ದೇಶಿಯ ಶೇರುಪೇಟೆಯ ಬಂಡವಾಳದ ಹೊರಹರಿವು ಹೆಚ್ಚಳವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 5 ಪೈಸೆ ಕುಸಿತ ಕಂಡಿದೆ. ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 48.73 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 5 ಪೈಸೆ ಕುಸಿತವಾಗಿದ್ದರಿಂದ ಡಾಲರ್‌ಗೆ 48.67/68 ರೂ.ಗಳಿಗೆ ತಲುಪಿದೆ. ಫಾರೆಕ್ಸ್ ಮಾರುಕಟ್ಟೆಯಲ್ಲಿ ಶುಕ್ರವಾರದ ವಹಿವಾಟಿನಲ್ಲಿ ದೇಶಿಯ ಕರೆನ್ಸಿ ಡಾಲರ್ ಎದುರಿಗೆ 17 ಪೈಸೆ ಏರಿಕೆ ಕಂಡು 48.67/68 ರೂ.ಗಳಿಗೆ ತಲುಪಿತ್ತು ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. ಏಷ್ಯಾ ಶೇರುಪೇಟೆಗಳ ವಹಿವಾಟು ಕುಸಿತದಿಂದಾಗಿ ದೇಶಿಯ ಶೇರುಪೇಟೆಯ ಮೇಲೆ ಪ್ರಭಾವ ಬೀರಲಿರುವುದರಿಂದ, ದೇಶಿಯ ಕರೆನ್ಸಿ ರೂಪಾಯಿ ಮೇಲೆ ಹೆಚ್ಚಿನ ಒತ್ತಡವಿತ್ತು ಎಂದು ಮಾರುಕಟ್ಟೆಯ ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಮಾರುಕಟ್ಟೆ ವಹಿವಾಟಿನಲ್ಲಿ ಶೇ.1.92 ರಷ್ಟು ಕುಸಿತ ಕಂಡಿದ್ದು, ಜಪಾನ್‌ನ ನಿಕೈ ಶೇರುಪೇಟೆ ಶೇ.0.61 ರಷ್ಟು ಇಳಿಕೆಯಾಗಿದೆ ಎಂದು ಶೇರುಪೇಟೆಯ ಮೂಲಗಳು ತಿಳಿಸಿವೆ. |