ದೇಶದ ಪ್ರಮುಖ ಕಾರು ತಯಾರಿಕೆ ಕಂಪೆನಿಯಾದ ಮಾರುತಿ ಸುಝುಕಿ, ಸ್ವಿಫ್ಟ್ ಮಾದರಿಯ ಕಾರುಗಳು ಮೂರು ಲಕ್ಷಕ್ಕೂ ಹೆಚ್ಚು ಕಾರುಗಳು ಮಾರಾಟವಾಗಿ ದಾಖಲೆ ಸ್ಥಾಪಿಸಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ. ಅತಿ ಕಡಿಮೆ ಅವಧಿಯಲ್ಲಿ ಸ್ವಿಫ್ಟ್ ಮಾದರಿಯ ಕಾರುಗಳು ಮೂರು ಲಕ್ಷಕ್ಕೂ ಹೆಚ್ಚಿನ ಕಾರುಗಳನ್ನು ಮಾರಾಟ ಮಾಡಲಾಗಿದೆ. ಸ್ವಿಫ್ಟ್ ಕಾರುಗಳ ಮಾಲೀಕರು ಸ್ವಿಫ್ಟ್ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಹಾಯವಾಗಲು ಆನ್‌ಲೈನ್ ಕ್ಲಬ್ ಆರಂಭಿಸಲಾಗಿದೆ ಎಂದು ಕಂಪೆನಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ವಿಫ್ಟ್ ಮಾಡೆಲ್ ಕಾರು ಜಾಗತಿಕ ಮಟ್ಟದ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು,ಸುಝುಕಿ ವಿನ್ಯಾಸದಿಂದ ಸುಝುಕಿ ಮೋಟಾರ್ ಕಾರ್ಪೋರೇಶನ್ ಕಂಪೆನಿಯ ಧ್ಯೆಯ ಮತ್ತು ಹೊಸ ಚಿಂತನೆಗಳನ್ನು ಪ್ರತಿನಿಧಿಸುತ್ತದೆ ಎಂದು ವ್ಯವಸ್ಥಾಪಕ ಕಾರ್ಯನಿರ್ವಾಹಕ ಅಧಿಕಾರಿ ಮಯಾಂಕ್ ಪರೀಖ್ ಹೇಳಿದ್ದಾರೆ. ಮಾರುತಿ ಸ್ವಿಫ್ಟ್ ಕಾರು ಕಳೆದ ಮೇ 2005ರಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗಿತ್ತು. ಮೂರು ವರ್ಷ ಎಂಟು ತಿಂಗಳುಗಳ ಅವಧಿಯಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮಾರುತಿ ಸ್ವಿಫ್ಟ್ ಕಾರು ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, 2007 ಜನೆವರಿಯಲ್ಲಿ ಡೀಸೆಲ್ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿತ್ತು ಎಂದು ಮಯಾಂಕ್ ತಿಳಿಸಿದ್ದಾರೆ. |