ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಸಹವರ್ತಿ ಬ್ಯಾಂಕ್‌ಗಳ ವಿಲೀನ ವಿರೋಧಿಸಿ ಬ್ಯಾಂಕ್‌ನ ಸಿಬ್ಬಂದಿಗಳು ದೇಶದಾದ್ಯಂತ ಮುಷ್ಕರ ಹಮ್ಮಿಕೊಂಡ ಹಿನ್ನೆಲೆಯಲ್ಲಿ ವಹಿವಾಟಿಗೆ ತೊಂದರೆಯಾಗಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇತರ ಸಹವರ್ತಿ ಬ್ಯಾಂಕ್‌ಗಳನ್ನು ವೀಲಿನಗೊಳಿಸಿ ಎಸ್‌ಬಿಐ ಸಿಬ್ಬಂದಿಗೆ ದೊರೆಯುವ ಸೌಲಭ್ಯಗಳನ್ನು ನೀಡಲು ಉದ್ದೇಶಿಸಿರುವ ಕ್ರಮವನ್ನು ಕೂಡಲೇ ರದ್ದುಗೊಳಿಸುವಂತೆ ಬ್ಯಾಂಕ್ ಸಂಘಟನೆಗಳು ಒತ್ತಾಯಿಸಿವೆ. ದೇಶದಾದ್ಯಂತ ನಡೆಯುತ್ತಿರುವ ಮುಷ್ಕರದಲ್ಲಿ 5 ಸಾವಿರ ಶಾಖೆಗಳ ಮೂರನೇ ದರ್ಜೆಯ ಹಾಗೂ ನಾಲ್ಕನೇ ದರ್ಜೆಯ ಸುಮಾರು 60 ಸಾವಿರ ಉದ್ಯೋಗಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯಿಸ್ ಅಸೋಸಿಯೇಶನ್ ಜಂಟಿ ಕಾರ್ಯದರ್ಶಿ ವಿಶ್ವಾಸ ಉತಗಿ ಹೇಳಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳ ಮುಷ್ಕರದಿಂದಾಗಿ ಬ್ಯಾಂಕ್ ವಹಿವಾಟಿಗೆ ತೊಂದರೆಯಾಗಿದೆ ಎಂದು ಉತಗಿ ತಿಳಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಡಳಿತ ಮಂಡಳಿಯ ಬಿಗಿ ನಿಲುವಿನಿಂದಾಗಿ ಇತ್ತೀಚೆಗೆ ನಡೆದ ಮಾತುಕತೆಗಳು ವಿಫಲವಾಗಿದ್ದರಿಂದ ಅನಿವಾರ್ಯವಾಗಿ ಮುಷ್ಕರದಲ್ಲಿ ಪಾಲ್ಗೊಳ್ಳಬೇಕಾಯಿತು ಎಂದು ವಿಶ್ವಾಸ್ ಉತಗಿ ಹೇಳಿದ್ದಾರೆ. |