ದೇಶಿಯ ಶೇರುಪೇಟೆ ಕುಸಿತದ ಹಿನ್ನೆಲೆಯಲ್ಲಿ ಬಂಡವಾಳದ ಹೊರಹರಿವು ಹೆಚ್ಚಳವಾಗಿದ್ದರಿಂದ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ 7 ಪೈಸೆ ಇಳಿಕೆ ಕಂಡಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ 49.77 ರೂ.ಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 7 ಪೈಸೆ ಕುಸಿತಗೊಂಡಿದೆ.
ಸತತ ಮೂರು ದಿನಗಳ ಅವಧಿಯಲ್ಲಿ ಒಟ್ಟು ರೂಪಾಯಿ ಮೌಲ್ಯ 88 ಪೈಸೆ ಕುಸಿತಗೊಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ದೇಶಿಯ ಶೇರುಪೇಟೆಯ ಮೇಲೆ ಪ್ರಭಾವ ಬೀರಿ ಬಂಡವಾಳದ ಹೊರಹರಿವು ಹೆಚ್ಚಳವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ರೂಪಾಯಿ ಮೇಲೆ ಒತ್ತಡ ಹೆಚ್ಚಳವಾಗಿದೆ.
ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಹೆಚ್ಚಳವಾಗಿರುವುದರಿಂದ ದೇಶಿಯ ಕರೆನ್ಸಿ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.47 ರಷ್ಟು ಮತ್ತು ಜಪಾನ್‌ನ ನಿಕೈ ಸೂಚ್ಯಂಕ ಶೇ.1.38 ರಷ್ಟು ಕುಸಿತವಾಗಿದೆ ಎಂದು ಫಾರೆಕ್ಸ್ ಮಾರುಕಟ್ಟೆಯ ಮೂಲಗಳು ತಿಳಿಸಿವೆ. |