ನವದೆಹಲಿ : ಆಂಧ್ರಪ್ರದೇಶದ ಸರಕಾರ ಸತ್ಯಂ ಹಗರಣವನ್ನು ಲಘುವಾಗಿ ಪರಿಗಣಿಸುತ್ತಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ವಿತ್ತ ಸಚಿವ ಪ್ರಣಬ್ ಮುಖರ್ಜಿ ಮಾತನಾಡಿ, ಸತ್ಯಂ ಅವ್ಯವಹಾರವನ್ನು ಸಂಪೂರ್ಣ ತನಿಖೆಗೆ ಒಳಪಡಿಸಿ ಆರೋಪಿಗಳನ್ನು ಖಂಡಿತವಾಗಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಸತ್ಯಂ ಹಗರಣದಲ್ಲಿ ಭಾಗಿಯಾದವರನ್ನು ರಕ್ಷಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.ತಪ್ಪು ಮಾಡುವವರನ್ನು ಸರಕಾರ ರಕ್ಷಿಸಲು ಪ್ರಯತ್ನಿಸುವುದಿಲ್ಲ ಎಂದು ಸಚಿವ ಮುಖರ್ಜಿ ಪ್ರಶ್ನೋತ್ತರ ಸಭೆಯಲ್ಲಿ ತಿಳಿಸಿದ್ದಾರೆ.
ಕಂಪೆನಿ ವೃತ್ತಿಪರವಾಗಿ ಮುಂದುವರಿದಲ್ಲಿ ಅಂತಾರಾಷ್ಟ್ರೀಯ ಗ್ರಾಹಕರು ಬೆಂಬಲ ನೀಡಲು ಸಿದ್ದರಾಗಿದ್ದಾರೆ ಎಂದು ಸಚಿವ ಮುಖರ್ಜಿ ಹೇಳಿದ್ದಾರೆ.
ಆಂಧ್ರಪ್ರದೇಶ ಸರಕಾರದ ಶಿಫಾರಸಿನ ಮೇರೆಗೆ ಸತ್ಯಂ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದು, ಸಂಪೂರ್ಣ ತನಿಖೆ ಮುಕ್ತಾಯವಾಗುವವರೆಗೆ ನಿರೀಕ್ಷಿಸಬೇಕಾಗುತ್ತದೆ ಎಂದು ಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ. |