ಮುಂಬೈ : ನಿವೃತ್ತ ಉದ್ಯೋಗಿಗಳ ಪಿಂಚಿಣಿ ವೇತನ ಕಡಿತಗೊಳಿಸಿರುವುದನ್ನು ವಿರೋಧಿಸಿ ರಿಸರ್ವ್ ಬ್ಯಾಂಕ್ ಉದ್ಯೋಗಿಗಳು ಒಂದು ದಿನದ ಮುಷ್ಕರ ಹಮ್ಮಿಕೊಂಡಿದ್ದಾರೆ.
1997ರ ನವೆಂಬರ್ ಪೂರ್ವದಲ್ಲಿ ನಿವೃತ್ತ ಉದ್ಯೋಗಿಗಳಿಗೆ ನೀಡುತ್ತಿರುವ ಪಿಂಚಣಿ ಯೋಜನೆಯನ್ನು ಸ್ಥಗಿತಗೊಳಿಸಿದ್ದು, ಮರುಜಾರಿಗೆ ತರುವಂತೆ ಒತ್ತಾಯಿಸಿ ಸಾಮೂಹಿಕ ರಜೆಯ ಮೇಲೆ ತೆರಳಿದ್ದಾರೆ ಎಂದು ಆರ್‌ಬಿಐ ಮೂಲಗಳು ತಿಳಿಸಿವೆ.
ಕೇಂದ್ರ ಸರಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ನಮ್ಮ ಬೇಡಿಕೆಗಳಿಗೆ ಸ್ಪಂದಿಸದೇ ಮನಬಂದಂತೆ ವರ್ತಿಸುತ್ತಿವೆ. ಆದ್ದರಿಂದ ಅನಿವಾರ್ಯವಾಗಿ ಮುಷ್ಕರ ಹಮ್ಮಿಕೊಳ್ಳಬೇಕಾಗಿದೆ ಎಂದು ಅಖಿಲ ಭಾರತ ರಿಸರ್ವ್ ಬ್ಯಾಂಕ್ ಉದ್ಯೋಗಿಗಳ ಸಂಘದ ಉಪಾಧ್ಯ7 ಅಜಿತ್ ಸುಬೇದಾರ್ ಹೇಳಿದ್ದಾರೆ.
ಕೇಂದ್ರ ರಿಸರ್ವ್ ಬ್ಯಾಂಕ್ ವಿತ್ತ ಸಚಿವಾಲಯಕ್ಕೆ ಪತ್ರ ಬರೆದು ನೂತನ ಪಿಂಚಣಿ ಯೋಜನೆಯನ್ನು ಸ್ಥಗಿತಗೊಳಿಸುವಂತೆ ಪತ್ರ ಬರೆದಿದೆ ಎಂದು ಸುಬೇದಾರ್ ಕಿಡಿಕಾರಿದ್ದಾರೆ. |