ಏಷ್ಯಾ ಶೇರುಪೇಟೆಗಳು ಚೇತರಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯಲ್ಲಿ ಕಳೆದೆರಡು ದಿನಗಳಿಂದ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್‌ಗೆ 14 ಪೈಸೆ ಏರಿಕೆ ಕಂಡಿದೆ. ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 49.73 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 14 ಪೈಸೆ ಏರಿಕೆ ಕಂಡಿದ್ದರಿಂದ ಡಾಲರ್‌ಗೆ 49.87/88 ರೂಪಾಯಿಗಳಿಗೆ ತಲುಪಿದೆ. ಏಷ್ಯಾದ ಶೇರುಪೇಟೆ ಹಾಂಗ್‌ಸೆಂಗ್ ಮತ್ತು ನಿಕೈ ಶೇರುಪೇಟೆಗಳ ಚೇತರಿಕೆಯ ಹಿನ್ನೆಲೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ. ಪ್ರಮುಖ ಬ್ಯಾಂಕ್‌ಗಳು ಹಾಗೂ ರಫ್ತು ವಹಿವಾಟುದಾರರು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ ರೂಪಾಯಿ ಮೌಲ್ಯ ಹೆಚ್ಚಳಕ್ಕೆ ಕಾರಣವಾಗಿದೆ. ಜಪಾನ್‌ನ ನಿಕೈ ಶೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಶೇ.1.87 ರಷ್ಟು ಏರಿಕೆ ಕಂಡಿದ್ದು ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಶೇ.2.49 ರಷ್ಟು ಏರಿಕೆಯಾಗಿದೆ. |