ಜಾಗತಿಕ ಆರ್ಥಿಕ ಕುಸಿತದ ಮಧ್ಯೆಯು ದೇಶದ ಕೈಗಾರಿಕೋದ್ಯಮ ಚೇತರಿಕೆ ಕಾಣುತ್ತಿರುವದಕ್ಕೆ ಅಭಿನಂದಿಸಿದ ಕೇಂದ್ರ ಗೃಹ ಸಚಿವ ಚಿದಂಬರಂ ಪ್ರಸಕ್ತ ವರ್ಷದ ಅಕ್ಟೋಬರ್ ತಿಂಗಳ ಅವಧಿಯಲ್ಲಿ ಆರ್ಥಿಕತೆ ಸುಸ್ಥಿತಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 2009-10 ರ ಮೂರನೇ ತ್ರೈಮಾಸಿಕ ಸಂದರ್ಭದಲ್ಲಿ ದೇಶದ ಆರ್ಥಿಕತೆಗೆ ಬಲ ಬರಲಿದೆ ಎಂದು ಮಾಜಿ ವಿತ್ತ ಸಚಿವ ಹಾಗೂ ಹಾಲಿ ಗೃಹಸಚಿವರಾದ ಚಿದಂಬರಂ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹೇಳಿದ್ದಾರೆ. ಪ್ರಸಕ್ತ ಎದುರಾಗಿರುವ ಆರ್ಥಿಕ ಕುಸಿತ ತಾತ್ಕಾಲಿಕವಾಗಿದ್ದು, ಜಾಗತಿಕ ಆರ್ಥಿಕ ಕುಸಿತದ ಸಂದರ್ಭದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ದರ ಶೇ.7 ರ ಗಡಿಯನ್ನು ತಲುಪಲಿದೆ. ಇದೊಂದು ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ. ಜಾಗತಿಕ ಆರ್ಥಿಕ ಕುಸಿತದ ಸಂದರ್ಭದಲ್ಲಿ ಭಾರತದ ವ್ಯಾಪಾರ ಹಾಗೂ ಕೈಗಾರಿಕೋದ್ಯಮ ಅತ್ಯುತ್ತಮ ಪ್ರದರ್ಶನ ತೋರಿದ್ದು, ಜಗತ್ತಿಗೆ ಉತ್ತಮ ಉದಾಹರಣೆಯಾಗಿದೆ ಎಂದರು. |