ಆಬಕಾರಿ ತೆರಿಗೆ ಹಾಗೂ ಸೇವಾ ತೆರಿಗೆಯನ್ನು ಕಡಿತಗೊಳಿಸಿದ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಆರ್‌ಬಿಐ ಮತ್ತು ಬ್ಯಾಂಕ್‌ಗಳು ಬಡ್ಡಿ ದರವನ್ನು ಮತ್ತಷ್ಟು ಕಡಿತಗೊಳಿಸಿ ಆರ್ಥಿಕ ಕುಸಿತವನ್ನು ತಡೆಯುವ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದ್ದಾರೆ.
ನನ್ನ ಕಳವಳವನ್ನು ರಿಸರ್ವ್ ಬ್ಯಾಂಕ್ ಗವರ್ನರ್ ಜೊತೆಯಲ್ಲಿ ಹಂಚಿಕೊಂಡಿದ್ದು, ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಸಮಾಲೋಚಿಸಿದ್ದೇನೆ. ಪ್ರೈಮ್ ಲೆಂಡಿಂಗ್ ದರ ಇನ್ನೂ ಹೆಚ್ಚಳವಾಗಿದೆ ಎಂದು ಕೈಗಾರಿಕೋದ್ಯಮಿಗಳು ಆರೋಪಿಸುತ್ತಿರುವುದರಿಂದ ಆರ್ಥಿಕತೆಗೆ ಧಕ್ಕೆ ತಾರದಂತೆ ಮತ್ತಷ್ಟು ಧೈರ್ಯ ತೋರಿ ಬಡ್ಡಿ ದರವನ್ನು ಕಡಿತಗೊಳಿಸಬೇಕು ಎಂದು ಸಲಹೆ ನೀಡಲಾಗಿದೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ರಾಜ್ಯಸಭೆಗೆ ತಿಳಿಸಿದ್ದಾರೆ.
ಕೇಂದ್ರ ಸರಕಾರ ಸಂವಿಧಾನಿಕ ಜವಾಬ್ದಾರಿಗಳಿಂದ ನುಣುಚಿಕೊಳ್ಳುವುದಿಲ್ಲ. ನಿರಂತರವಾಗಿ ಮಾರುಕಟ್ಟೆ ಹಾಗೂ ಕೈಗಾರಿಕೋದ್ಯಮದ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಸೂಕ್ತ ಸಮಯದಲ್ಲಿ ಸ್ಪಂದಿಸಲಿದೆ ಎಂದು ಲೋಕಸಭೆಗೆ ಮಧ್ಯಂತರ ಬಜೆಟ್ ಕುರಿತಂತೆ ನೀಡಿದ ವಿವರಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರಕಾರ ದೇಶಿಯ ಉತ್ಪನ್ನಗಳಿಗೆ ಬೇಡಿಕೆ ದೊರೆಯಲು ಅಬಕಾರಿ ತೆರಿಗೆ ಹಾಗೂ ಸೇವಾ ತೆರಿಗೆಯಲ್ಲಿ ಶೇ.2 ರಷ್ಟು ಕಡಿತಗೊಳಿಸಿ ಆದೇಶ ಹೊರಡಿಸಿದೆ |