ಜನಸಾಮಾನ್ಯರಿಗೆ ಪ್ರಯಾಣಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಪ್ರಸಕ್ತ ಸಾಲಿನಲ್ಲಿ 3,800 ಬಸ್‌ಗಳನ್ನು ಖರೀದಿಸಲು ನಿರ್ಧರಿಸಿರುವುದಾಗಿ ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಷಾಂತ್ಯದೊಳಗೆ ಸುಮಾರು 200ವೋಲ್ವೊ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗುವುದು ಎಂದರು.
ಅಲ್ಲದೇ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವ ಯೋಜನೆ ಇರುವುದಾಗಿಯೂ ಅವರು ಈ ಸಂದರ್ಭದಲ್ಲಿ ಹೇಳಿದರು. ಪ್ರಯಾಣಿಕರ ಅನುಕೂಲಕ್ಕೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ಹಂತ, ಹಂತವಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು. |