ದೇಶಿಯ ಶೇರುಪೇಟೆಯಲ್ಲಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 38 ಪೈಸೆ ಏರಿಕೆ ಕಂಡಿದೆ. ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ 51.49 ರೂಪಾಯಿಗಳಿಗೆ ಮುಕ್ತಾಯವಾಗಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 38 ಪೈಸೆ ಏರಿಕೆ ಕಂಡಿದ್ದರಿಂದ 51.87/89 ರೂಪಾಯಿಗಳಿಗೆ ತಲುಪಿದೆ. ಏಷ್ಯಾ ಶೇರುಪೇಟೆಗಳ ಮಿಶ್ರ ಫಲಿತಾಂಶ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದ್ದು, ಬಂಡವಾಳದ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯಲ್ಲಿ ರೂಪಾಯಿ ಮೌಲ್ಯದಲ್ಲಿ ಹೆಚ್ಚಳವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ಅಭಿಪ್ರಾಯಪಟ್ಟಿದ್ದಾರೆ. ರಫ್ತು ವಹಿವಾಟುದಾರರು ಹಾಗೂ ಬ್ಯಾಂಕ್‌ಗಳು ಡಾಲರ್‌ಗಳ ಮಾರಾಟದಲ್ಲಿ ತೊಡಗಿದ್ದರಿಂದ ರೂಪಾಯಿ ಮೌಲ್ಯ ಏರಿಕೆಗೆ ಬೆಂಬಲ ದೊರೆತಂತಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. |