ಜಗತ್ತಿನ ಆರ್ಥಿಕ ಶಕ್ತಿಶಾಲಿ ರಾಷ್ಟ್ರಗಳು ಮಾರುಕಟ್ಟೆಗಳಲ್ಲಿ ಬೇಡಿಕೆಯನ್ನು ಹೆಚ್ಚಿಸಲು ಉತ್ತೇಜನ ಪ್ಯಾಕೇಜ್‌ಗಳನ್ನು ಘೋಷಿಸುವುದು ಅಗತ್ಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.
ವಿಶ್ವದಾದ್ಯಂತ ಎದುರಾದ ಆರ್ಥಿಕ ಕುಸಿತದಿಂದಾಗಿ ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ಹಾಗೂ ವಹಿವಾಟು ಕುಸಿತ ಕಂಡುಬಂದಿದೆ ಎಂದು ಒಬಾಮಾ ಅಮೆರಿಕನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆದ್ದರಿಂದ ಪ್ರತಿಯೊಂದು ದೇಶಗಳು ತಮ್ಮ ದೇಶಗಳಲ್ಲಿ ಉತ್ತೇಜನ ಪ್ಯಾಕೇಜ್‌ಗಳನ್ನು ಘೋಷಿಸಿ ದೇಶಿಯ ವಹಿವಾಟು ಚೇತರಿಕೆಯತ್ತ ಗಮನಹರಿಸಿ ವಿಶ್ವದ ಪ್ರಮುಖ ಆರ್ಥಿಕ ಶಕ್ತಿಶಾಲಿ ರಾಷ್ಟ್ರಗಳು ಒಂದಾಗಿ ಆರ್ಥಿಕ ಕುಸಿತವನ್ನು ತಡೆಯಬೇಕು ಎಂದು ಹೇಳಿದ್ದಾರೆ.
ನಾವು ರಕ್ಷಣಾತ್ಮಕ ವಹಿವಾಟಿನ ಬಗ್ಗೆ ಗಮನಹರಿಸಿಲ್ಲ. ಪ್ರತಿಯೊಂದು ರಾಷ್ಟ್ರಗಳು ಉತ್ತೇಜನ ಪ್ಯಾಕೇಜ್‌ಗಳನ್ನು ಘೋಷಿಸಿದಲ್ಲಿ ಪರಸ್ಪರ ರಾಷ್ಟ್ರಗಳು ಆರ್ಥಿಕ ಕುಸಿತವನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಕೆಲ ತಿಂಗಳುಗಳ ಹಿಂದೆ ದೇಶದ ರಫ್ತು ವಹಿವಾಟು ದೇಶದ ಆರ್ಥಿಕತೆಯಲ್ಲಿ ಮಹತ್ತರ ಪಾತ್ರವಹಿಸಿತ್ತು. ಆದರೆ ಪ್ರಸಕ್ತ ಸಂದರ್ಭದಲ್ಲಿ ಬಾರಿ ಕುಸಿತ ಕಂಡಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಲಂಡನ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ದಿ-20 ಶೃಂಗ ಸಭೆಯಲ್ಲಿ ಜಾಗತಿಕ ಮಟ್ಟದ ನಾಯಕರೊಂದಿಗೆ ಚರ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ. |