ಮುಂದಿನ ತಿಂಗಳು ಲಂಡನ್‌ನಲ್ಲಿ ನಡೆಯಲಿರುವ ಜಿ-20 ರಾಷ್ಟ್ರಗಳ ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್, ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಸಿ .ರಂಗರಾಜನ್ ಮತ್ತು ವಿಶ್ವಸಂಸ್ಥೆಯ ಮಾಜಿ ಆಧೀನ ಪ್ರಧಾನ ಕಾರ್ಯದರ್ಶಿ ಶಶಿ ತರೂರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಪ್ರಧಾನಿ ಮಂತ್ರಿಯವರನ್ನು ಭೇಟಿ ಹಲವು ವಿಷಯಗಳ ಕುರಿತಂತೆ ಚರ್ಚೆ ನಡೆಸಲಾಯಿತು ಎಂದು ಪ್ರಸ್ತುತ ರಾಜ್ಯಸಭಾ ಸದಸ್ಯರಾದ ರಂಗರಾಜನ್ ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ.ಲಂಡನ್‌ನಲ್ಲಿ ನಡೆಯುವ ಜಿ-20 ರಾಶ್ಟ್ರಗಳ ಶೃಂಗಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ. ತರೂರ್ ವಿಶ್ವಸಂಸ್ಥೆಯ ಪ್ರದಾನ ಕಾರ್ಯದರ್ಶಿ ಹುದ್ದೆಯ ಅಕಾಂಕ್ಷಿಯಾಗಿದ್ದು, ಮುಂಬರುವ ಲೋಕಸಭೆಯಲ್ಲಿ ಸ್ಪರ್ಧೆಗಿಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬೈಪಾಸ್ ಸರ್ಜರಿಯಿಂದ ಗುಣಮುಖರಾದ ಪ್ರಧಾನಿ ರಾಷ್ಟ್ರೀಯ ಭಧ್ರತಾ ಸಲಹೆಗಾರ ಎಂ.ಕೆ.ನಾರಾಯಣನ್ ಅವರೊಂದಿಗೆ ಕೂಡಾ ಚರ್ಚೆ ನಡೆಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. |