ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಜನವರಿ ತಿಂಗಳಿನಲ್ಲಿ ಭಾರತಕ್ಕೆ 2.7 ಶತಕೋಟಿ ಡಾಲರ್ ವಿದೇಶಿ ನೇರ ಬಂಡವಾಳ ಹರಿದು ಬಂದಿದ್ದು, ಇದು 2008 ಜನವರಿ ಎಫ್‌ಡಿಐಗೆ ಹೋಲಿಸಿದರೆ ಶೇಕಡಾ 58.8 ಏರಿಕೆಯಾಗಿದೆ ಎಂದು ಕೇಂದ್ರ ಕೈಗಾರಿಕಾ ನೀತಿ ಮತ್ತು ಉತ್ತೇಜನ ಇಲಾಖೆಯ ಕಾರ್ಯದರ್ಶಿ ಅಜಯ್ ಶಂಕರ್ ತಿಳಿಸಿದ್ದಾರೆ. |