ಜಾಗತಿಕ ಆರ್ಥಿಕ ಹಿಂಜರಿತದ ಹಿನ್ನಲೆಯಲ್ಲಿ ಐಟಿ ಕ್ಷೇತ್ರದಲ್ಲಿ ಉದ್ಯೋಗ ಕಡಿತ ಅನಿವಾರ್ಯವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ ವಿವೇಕ ಕುಲಕರ್ಣಿ ಹೇಳಿದ್ದಾರೆ. ಇದೇ ವೇಳೆ 2010-11 ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲೇ ಗುತ್ತಿಗೆ ಆಧಾರದ ಮೇಲೆ ಉದ್ಯೋಗಕ್ಕೆ ಸೇರಿಸಿಕೊಳ್ಳುವ ಕ್ರಮ ಮರು ಆರಂಭವಾಗುವ ನಿರೀಕ್ಷೆಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |