ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್ : ರೂಪಾಯಿ ಮೌಲ್ಯ ಬಲವರ್ಧನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್ : ರೂಪಾಯಿ ಮೌಲ್ಯ ಬಲವರ್ಧನೆ
PTI
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ಹಿನ್ನೆಲೆಯಲ್ಲಿ ದೇಶಿಯ ಶೇರುಪೇಟೆಯಲ್ಲಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 15 ಪೈಸೆ ಏರಿಕೆ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 51.34 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 15 ಪೈಸೆ ಏರಿಕೆ ಕಂಡಿದ್ದರಿಂದ 51.49/50 ರೂ.ಗಳಿಗೆ ತಲುಪಿದೆ.

ದೇಶಿಯ ಶೇರುಪೇಟೆಯ ವಹಿವಾಟಿನಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಳವಾಗುವ ನಿರೀಕ್ಷೆಯಿಂದಾಗಿಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆ ಕಂಡು ಸಕರಾತ್ಮಕ ವಲಯದತ್ತ ಸಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಏಷ್ಯಾ ಕರೆನ್ಸಿಗಳ ಚೇತರಿಕೆಯ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳು, ರಫ್ತು ವಹಿವಾಟುದಾರರು ಡಾಲರ್ ಮಾರಾಟದಲ್ಲಿ ತೊಡಗಿದ್ದರಿಂದ ರೂಪಾಯಿ ಮೌಲ್ಯ ಏರಿಕೆಗೆ ಮತ್ತೊಂದು ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿಐಪಿಗಳಿಗೆ ಭದ್ರತಾ ಕಾರು 'ದಿ ಡೆವಿಲ್'
ಉದ್ಯೋಗ ಕಡಿತ ಅನಿವಾರ್ಯ: ಕುಲಕರ್ಣಿ
ಅಮೆರಿಕನ್‌‌ರನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ: ಸಮೀಕ್ಷೆ
ನೋಕಿಯಾದಿಂದ 1,700 ನೌಕರರ ವಜಾ
ಭಾರತೀಯ ಸಿಇಒಗಳು ಆತ್ಮವಿಶ್ವಾಸದಲ್ಲಿ ನಂ.1
ಮುರಿದು ಬಿದ್ದ ಸತ್ಯಂ-ಟೆಲ್‌ಸ್ಟ್ರಾ ಒಪ್ಪಂದ