ಪ್ರಸಕ್ತ ಆರ್ಥಿಕ ಸಾಲಿನ ನೇರ ತೆರಿಗೆ ಸಂಗ್ರಹ ಶೇ.18 ರಷ್ಟು ಏರಿಕೆಯಾಗಿದ್ದು, 296,200 ಕೋಟಿ ರೂ.ಗಳಿಗೆ ತಲುಪಿದೆ ಎಂದು ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ.
2008-09ರ ಆರ್ಥಿಕ ಸಾಲಿನಲ್ಲಿ ತೆರಿಗೆ ಅಧಿಕಾರಿಗಳಿಗೆ 3,45,000 ಕೋಟಿ ರೂ .ಗಳ ಗುರಿಯನ್ನು ಸಂಗ್ರಹಿಸಲು ಆದೇಶಿಸಲಾಗಿತ್ತು. ಆದರೆ ಹಿಂದಿನ ವರ್ಷಕ್ಕೆ ಹೋಲಿಸಿದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ 2,96,200 ಕೋಟಿ ರೂ.ಗಳ ಗುರಿಯನ್ನು ತಲುಪಿ ಶೇ.18 ರಷ್ಟು ಹೆಚ್ಚಿನ ತೆರಿಗೆಯನ್ನು ಸಂಗ್ರಹಿಸಲಾಗಿದೆ ಎಂದು ವಿತ್ತ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಾರ್ಪೋರೇಟ್ ತೆರಿಗೆಯಲ್ಲಿ ಶೇ.36 ರಷ್ಟು ಹೆಚ್ಚಳವಾಗಿದ್ದು, ನಾನ್-ಕಾರ್ಪೋರೇಟ್ ತೆರಿಗೆಯಲ್ಲಿ ಶೇ.17 ರಷ್ಟು ಏರಿಕೆಯಾಗಿದೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಪರಿಶೋಧಿತ ಗುರಿಯಾದ 3,45,000 ಕೋಟಿ ರೂ.ಗಳ ಗುರಿಯನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ತಲುಪಲಾಗುವುದು. ಪ್ರಸ್ತುತ 49 ಸಾವಿರ ಕೋಟಿ ರೂ.ಗಳ ಕೊರತೆಯನ್ನು ಎದುರಿಸಲಾಗುತ್ತಿದೆ ಎಂದು ವಿತ್ತ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. |