PTI ಸರಕಾರಿ ಸ್ವಾಮ್ಯದ ಭಾರತ ಸಂಚಾರ್ ನಿಗಮ ಮುಂಬರುವ ಏಪ್ರಿಲ್ ತಿಂಗಳಿನಿಂದ ಬ್ಲ್ಯಾಕ್ ಬೆರ್ರಿ ಸೇವೆಯನ್ನು ಆರಂಭಿಸಲಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಸರಕಾರದಿಂದ ಅನುಮತಿ ದೊರೆತಿದ್ದು, ಮುಂಬರುವ ತಿಂಗಳಿನಿಂದ ಬ್ಲ್ಯಾಕ್ ಬೆರ್ರಿ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಬಿಎಸ್‌ಎನ್‌ಎಲ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕುಲದೀಪ್ ಗೋಯಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.ಪ್ರಸ್ತುತ ರಿಲಯನ್ಸ್ ಕಮ್ಯುನಿಕೇಶನ್ಸ್, ಭಾರ್ತಿ ಏರ್‌ಟೆಲ್, ವೊಡಾಫೋನ್ ಮತ್ತು ಟಾಟಾ ಟೆಲಿ ಸರ್ವಿಸಸ್‌ಗಳು ಬ್ಲ್ಯಾಕ್ ಬೆರ್ರಿ ಸೇವೆಯನ್ನು ನೀಡುತ್ತಿವೆ.