ಫಾರೆಕ್ಸ್ : ರೂಪಾಯಿ ಮೌಲ್ಯ ಏರಿಕೆ | | | ಮುಂಬೈ, ಗುರುವಾರ, 19 ಮಾರ್ಚ್ 2009( 11:14 IST ) | | | |
| | |
| ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ಹಿನ್ನೆಲೆಯಲ್ಲಿ ದೇಶಿಯ ಶೇರುಪೇಟೆಯಲ್ಲಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 30 ಪೈಸೆ ಏರಿಕೆ ಕಂಡಿದೆ.ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 51.00 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 30 ಪೈಸೆ ಏರಿಕೆ ಕಂಡಿದ್ದರಿಂದ 51.30/31 ರೂ.ಗಳಿಗೆ ತಲುಪಿದೆ. ದೇಶಿಯ ಶೇರುಪೇಟೆಯ ವಹಿವಾಟಿನಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಳವಾಗುವ ನಿರೀಕ್ಷೆಯಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆ ಕಂಡು ಸಕರಾತ್ಮಕ ವಲಯದತ್ತ ಸಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಏಷ್ಯಾ ಕರೆನ್ಸಿಗಳ ಚೇತರಿಕೆಯ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳು, ರಫ್ತು ವಹಿವಾಟುದಾರರು ಡಾಲರ್ ಮಾರಾಟದಲ್ಲಿ ತೊಡಗಿದ್ದರಿಂದ ರೂಪಾಯಿ ಮೌಲ್ಯ ಏರಿಕೆಗೆ ಮತ್ತೊಂದು ಕಾರಣವಾಗಿದೆ ಎಂದು ತಿಳಿಸಿದ್ದಾರೆ. |
| |
|