ಶೇರುಪೇಟೆಯ ಕುಸಿತದ ಮಧ್ಯೆಯು ಬಂಡವಾಳದ ಒಳಹರಿವು ಹೆಚ್ಚಳವಾಗುವುವ ನಿರೀಕ್ಷೆಯಲ್ಲಿ ಬ್ಯಾಂಕ್‌ಗಳು ಡಾಲರ್ ಮಾರಾಟದಲ್ಲಿ ತೊಡಗಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 18 ಪೈಸೆ ಹೆಚ್ಚಳವಾಗಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 50.38/50.39 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 18 ಪೈಸೆ ಏರಿಕೆಯಾಗಿ 50.20 ಡಾಲರ್‌ಗಳಿಗೆ ತಲುಪಿದೆ.
ದೇಶಿಯ ಶೇರುಪೇಟೆಯಲ್ಲಿ ವಿದೇಶಿ ಬಂಡವಾಳ ಹೂಡಿಕೆಯ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯಲ್ಲಿ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಬ್ಯಾಂಕ್‌ಗಳಿಂದ ಡಾಲರ್‌ಗಳ ಮಾರಾಟ ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಕುಸಿತದಿಂದಾಗಿ ರೂಪಾಯಿ ಮೌಲ್ಯ ಏರಿಕೆಗೆ ಬೆಂಬಲ ದೊರೆತಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. |