ಸರಕಾರಿ ಸ್ವಾಮ್ಯದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಇಂಧನ ಅಗತ್ಯತೆಗಳನ್ನು ಪೂರೈಸಲು ಮುಂಬರುವ ಆರ್ಥಿಕ ಸಾಲಿನಲ್ಲಿ 12.5 ಮಿಲಿಯನ್ ಟನ್ ಕಲ್ಲಿದ್ದಲನ್ನು ಅಮುದು ಮಾಡಿಕೊಳ್ಳಲು ನಿರ್ಧರಿಸಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಮುಂದಿನ ಆರ್ಥಿಕ ವರ್ಷದಲ್ಲಿ ಇಂಧನ ಅಗತ್ಯತೆಗಳನ್ನು ಪೂರ್ಣಗೊಳಿಸಲು 12.5 ಮಿಲಿಯನ್ ಟನ್ ಕಲ್ಲಿದ್ದಲನ್ನು ಅಮುದು ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಎನ್‌ಟಿಪಿಸಿ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆರ್.ಎಸ್.ಶರ್ಮಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ದಾದ್ರಿ ಥರ್ಮಲ್ ಪವರ್ ಸ್ಟೇಶನ್‌ನ ಎರಡು ಘಟಕಗಳು ಸಿಪಾಟ್ ಥರ್ಮಲ್ ಪವರ್ ಸ್ಟೇಶನ್‌ನ ಎರಡು ಘಟಕಗಳು ಹಾಗೂ ಕೊರ್ಬಾ ಥರ್ಮಲ್ ಪವರ್ ಸ್ಟೇಶನ್ ಹಾಗೂ ಅರವಳ್ಳಿ ಪವರ್ ಸ್ಟೇಶನ್‌ಗಳಲ್ಲಿ ಪ್ರಸಕ್ತ ವರ್ಷದಲ್ಲಿ 3ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಇಂಧನ ಅಗತ್ಯತೆಗಳನ್ನು ಪೂರೈಸಲು ಅಗತ್ಯವಿರುವ ಗುರಿಯಾದ 8.2 ಮಿಲಿಯನ್ ಟನ್ ಕಲ್ಲಿದ್ದಲು ಅಮುದಿನ ಬದಲಾಗಿ ಅಂದಾಜು ಐದು ಟನ್‌ಗಳನ್ನು ಮಾತ್ರ ಅಮುದು ಮಾಡಿಕೊಳ್ಳುತ್ತಿದೆ ಎಂದು ಶರ್ಮಾ ತಿಳಿಸಿದ್ದಾರೆ. |