ಭಾರತೀಯ ರಿಸರ್ವ್ ಬ್ಯಾಂಕ್ ಮುಕ್ತ ಮಾರುಕಟ್ಟೆಯ ಹರಾಜಿನಲ್ಲಿ 10 ಸಾವಿರ ಕೋಟಿ ರೂಪಾಯಿಗಳ ಭದ್ರತಾ ಪತ್ರಗಳನ್ನು ಖರೀದಿಸಲು ನಿರ್ಧರಿಸಿದೆ ಎಂದು ಆರ್‌ಬಿಐ ಮೂಲಗಳು ತಿಳಿಸಿವೆ.ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ನಗದು ಚಲಾವಣೆ ಹೆಚ್ಚಿಸಲು ಮುಕ್ತ ಮಾರುಕಟ್ಟೆಯ ಹರಾಜಿನಲ್ಲಿ ಭದ್ರತಾ ಪತ್ರಗಳನ್ನು ಖರೀದಿಸಲು ನಿರ್ಧರಿಸಲಾಗಿದೆ ಎಂದು ಸೆಂಟ್ರಲ್ ಬ್ಯಾಂಕ್ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ. ಬಾಂಡ್‌ಗಳ ಖರೀದಿ ಕುರಿತಂತೆ ಮಾರ್ಚ್ 26 ರಂದು ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ರಿಸರ್ವ್ ಬ್ಯಾಂಕ್ ತಿಳಿಸಿದೆ. ಭದ್ರತ ಪತ್ರಗಳ ಹರಾಜಿನ ಕುರಿತಂತೆ ಸಂಪೂರ್ಣ ವಿವರಗಳನ್ನು ಮಾರ್ಚ್ 23 ರಂದು ಘೋಷಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮೂಲಗಳು ತಿಳಿಸಿವೆ. |