ಏಷ್ಯಾ ಶೇರುಪೇಟೆಗಳ ಸ್ಥಿರ ವಹಿವಾಟಿನಿಂದಾಗಿ ದೇಶಿಯ ಶೇರುಪೇಟೆ ಚೇತರಿಸಿಕೊಂಡ ಹಿನ್ನೆಲೆಯಲ್ಲಿ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ಸಾಧ್ಯತೆಗಳಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 23 ಪೈಸೆ ಏರಿಕೆಯಾಗಿದೆ. ಏಷ್ಯಾದ ಇತರ ಕರೆನ್ಸಿಗಳ ಮುಂದೆ ಡಾಲರ್ ದುರ್ಬಲವಾಗಿದ್ದರಿಂದ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ತಿಳಿಸಿವೆ.ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 50.22 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 23 ಪೈಸೆ ಏರಿಕೆಯಾಗಿ 50.45/46 ರೂಪಾಯಿಗಳಿಗೆ ತಲುಪಿದೆ.ಏಷ್ಯಾ ಶೇರುಪೇಟೆಗಳ ಸ್ಥಿರ ವಹಿವಾಟಿನಿಂದಾಗಿ ದೇಶಿಯ ಶೇರುಪೇಟೆ ಚೇತರಿಸಿಕೊಂಡ ಹಿನ್ನೆಲೆಯಲ್ಲಿ, ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ಸಾಧ್ಯತೆಗಳಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಏರಿಕೆ ಕಂಡಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.ಸೋಮವಾರದ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ 18ಪೈಸೆ ಏರಿಕೆ ಕಂಡು 50.45/46 ರೂಪಾಯಿಗಳಿಗೆ ತಲುಪಿತ್ತು. |