ದೇಶದ ಆರ್ಥಿಕತೆ ಪುನಶ್ಚೇತನಗೊಳಿಸಲು ಕೇಂದ್ರ ಸರಕಾರ ಮತ್ತು ಬಾರತೀಯ ರಿಸರ್ವ್ ಬ್ಯಾಂಕ್ ನಿರಂತರ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅಶೋಕ್ ಚಾವ್ಲಾ ಹೇಳಿದ್ದಾರೆ.
ಏಷ್ಯಾದ ಮೂರನೇ ಬಲಿಷ್ಟ ಆರ್ಥಿಕ ರಾಷ್ಟ್ರವಾದ ಭಾರತ ಪ್ರಸಕ್ತ ವರ್ಷದ ಆರ್ಥಿಕ ಸಾಲಿನಲ್ಲಿ ಶೇ.7.1 ರಷ್ಟು ಜಿಡಿಪಿ ಗಡಿಯನ್ನು ತಲುಪಲಿದ್ದು, 2009-10 ರ ಆರ್ಥಿಕ ಸಾಲಿನಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಗಳಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಆರ್ಥಿಕ ಪುನಶ್ಚೇತನಕ್ಕಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಚಾವ್ಲಾ ತಿಳಿಸಿದ್ದಾರೆ.
ದೇಶದ ಆರ್ಥಿಕತೆಯ ಪುನಸ್ಚೇತನಕ್ಕಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಕ್ಟೋಬರ್ ತಿಂಗಳಲ್ಲಿ ಬಡ್ಡಿ ದರವನ್ನು ಕಡಿತಗೊಳಿಸಿದ್ದು, ಕೇಂದ್ರ ಸರಕಾರ ತೆರಿಗೆಗಳನ್ನು ಕಡಿತಗೊಳಿಸಿ ಉತ್ತೇಜನ ಪ್ಯಾಕೇಜ್‌ಗಳನ್ನು ಘೋಷಿಸಿತ್ತು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಡಿ.ಸುಬ್ಬಾರಾವ್ ಮಾತನಾಡಿ,ಮತ್ತಷ್ಟು ಪ್ಯಾಕೇಜ್‌ಗಳನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಿಕೆ ನೀಡಿದ್ದಾರೆ. |