ಆರ್ಥಿಕ ಸಂಸ್ಥೆಗಳಿಗೆ ಐಎಂಎಫ್ ಹಾಗೂ ವಿಶ್ವಬ್ಯಾಂಕ್‌ನ ಬಿಗು ನಿಯಂತ್ರಣದ ಕೊರತೆಯಿಂದಾಗಿ ಜಾಗತಿಕ ಆರ್ಥಿಕ ಹಿಂಜರಿತಕ್ಕೆ ಪ್ರಮುಖ ಕಾರಣವಾಗಿದ್ದು, ಈ ಬಗ್ಗೆ ಲಂಡನ್‌ನಲ್ಲಿ ನಡೆಯಲಿರುವ ಜಿ-20ಶೃಂಗಸಭೆಯಲ್ಲಿ ಚರ್ಚಿಸುವುದಾಗಿ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ವಿಶ್ವ ಬ್ಯಾಂಕ್ ಹಾಗೂ ಐಎಂಎಫ್‌ಗಳಿಂದ ಆರ್ಥಿಕ ಸಂಸ್ಥೆಗಳನ್ನು ಹತೋಟಿಯಲ್ಲಿಡುವ ಬಿಗು ಕಾನೂನಿನ ನಿಯಂತ್ರಣ ಇಲ್ಲದಿರುವುದೇ ಜಾಗತಿಕ ಆರ್ಥಿಕ ಹಿಂಜರಿತಕ್ಕೆ ಪ್ರಮುಖ ಅಂಶವಾಗಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ವಿಶ್ಲೇಷಿಸಿದರು.
ಈ ಬಗ್ಗೆ ಲಂಡನ್‌ನಲ್ಲಿ ಆರಂಭವಾಗಲಿರುವ ಜಿ-20ಶೃಂಗಸಭೆಯಲ್ಲಿ ಚರ್ಚೆ ನಡೆಸುವುದಾಗಿ ಮುಖರ್ಜಿ ಈ ಸಂದರ್ಭದಲ್ಲಿ ತಿಳಿಸಿದರು. ಆರ್ಥಿಕ ಹಿಂಜರಿತಕ್ಕೆ ಮುಖ್ಯ ಕಾರಣವೇನು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತ ಅವರು ಪ್ರತಿಕ್ರಿಯಿಸಿದರು. ಇದರಿಂದಾಗಿ ಅಭಿವೃದ್ಧಿಶೀಲ ದೇಶಗಳಿಗೆ ಭಾರೀ ಹೊಡೆತ ಬಿದ್ದಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. |