ಜಾಗತಿಕ ಆರ್ಥಿಕ ಹಿಂಜರಿತದ ಹೊಡೆತದ ಆತಂಕ ಹೆಚ್ಚಾಗಿರುವ ಹಿನ್ನಲೆಯಲ್ಲಿ ದೇಶದ ಆರ್ಥಿಕ ಸ್ಥಿತಿ ಸುಧಾರಿಸಲು ಮತ್ತಷ್ಟು ಆರ್ಥಿಕ ನೆರವು ಅಗತ್ಯವಿದೆ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಆರ್ಥಿಕ ಖೋತಾ ಸರಿಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ನೆರವಿನ ಅಗತ್ಯವಿದೆ ಎಂದು ಹೇಳಿರುವ ಅವರು, ಮುಂದಿನ ಆರ್ಥಿಕ ವರ್ಷದ ಲೆಕ್ಕಚಾರದಲ್ಲಿಯೂ ಖೋತಾ ಅಂಶ ಯಥಾಸ್ಥಿತಿಯಲ್ಲಿಯೇ ಇರುತ್ತದೋ ಅಥವಾ ಕಡಿಮೆಯಾಗುತ್ತದೋ ಎಂಬುದು ಹೇಳಲಾಗುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
2009-2010ನೇ ಸಾಲಿನ ರಫ್ತು ಪ್ರಮಾಣ ತುಂಬಾ ಕೆಟ್ಟದಾಗಿದೆ ಎಂದು ಸಿಂಗ್ ಹೇಳಿದರು. ಆ ಕಾರಣಕ್ಕಾಗಿ ಬೇಡಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆರ್ಥಿಕ ಪ್ಯಾಕೇಜ್ ನೆರವಿನ ಅಗತ್ಯವಿದೆ ಎಂದರು.
ದೇಶದ ಹಣದುಬ್ಬರ ಸದ್ಯದ ಸ್ಥಿತಿಯಲ್ಲಿ ನಿಯಂತ್ರಣದಲ್ಲಿದೆ, ಹಣದುಬ್ಬರ ಆರ್ಥಿಕ ಹಿಂಜರಿಕೆಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. |