ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಹಿನ್ನೆಲೆಯಲ್ಲಿ ದೇಶದ ಬ್ಯಾಂಕ್‌ಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುವ ಸರ್ಕಾರದ ಬ್ಯಾಂಕ್ ರಾಷ್ಟ್ರೀಕರಣ ಕಾಯ್ದೆಗೆ ಜರ್ಮನ್ ಅಧ್ಯಕ್ಷ ಹೊರ್‌ಸ್ಟ್ ಕೊಹ್ಲೆರ್ ಅಂಕಿತ ಹಾಕಿರುವುದಾಗಿ ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ.
ದೇಶದ ಬ್ಯಾಂಕುಗಳಲ್ಲಿರುವ ಹಣದ ಸುರಕ್ಷತೆ ಹಾಗೂ ಭದ್ರತೆಯ ದೃಷ್ಟಿಯಿಂದ ಬ್ಯಾಂಕ್ ರಾಷ್ಟ್ರೀಕರಣ ಕಾಯ್ದೆ ಜಾರಿಗೊಳಿಸುತ್ತಿರುವುದಾಗಿ ಬರ್ಲಿನ್ ತಿಳಿಸಿದೆ.
ವಿಶ್ವ ಆರ್ಥಿಕ ಹಿಂಜರಿತದಿಂದ ಅಮೆರಿಕ, ಜಪಾನ್, ಭಾರತ ಸೇರಿದಂತೆ ಹಲವಾರು ದೇಶಗಳು ಬಿಕ್ಕಟ್ಟಿಗೆ ಸಿಲುಕಿದ್ದು, ಆರ್ಥಿಕ ಚೇತರಿಕೆಗಾಗಿ ಹೆಚ್ಚುವರಿ ಆರ್ಥಿಕ ನೆರವು ನೀಡುವಂತೆ ವಿಶ್ವಬ್ಯಾಂಕ್ ಮೊರೆ ಹೋಗುತ್ತಿವೆ.
ಅಲ್ಲದೇ ಹಲವಾರು ದೇಶಗಳಲ್ಲಿ ಪ್ರತಿಷ್ಠಿತ ಕಂಪೆನಿಗಳ ನೌಕರರನ್ನು ವಜಾಗೊಳಿಸುವ ಪ್ರಕ್ರಿಯೆಯೂ ಮುಂದುವರಿದಿದೆ. ಜಪಾನ್, ಭಾರತ ಸೇರಿದಂತೆ ಹಲವು ದೇಶಗಳು ಈಗಾಗಲೇ ಆರ್ಥಿಕ ನೆರವಿನ ಪ್ಯಾಕೇಜ್‌ಗಾಗಿ ವಿಶ್ವಬ್ಯಾಂಕ್ ಮೊರೆ ಹೋಗಿವೆ. |