ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮಾಸಾಂತ್ಯಕ್ಕೆ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ 18 ಪೈಸೆ ಕುಸಿತ ಕಂಡಿದೆವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ಗೆ 49.80/81 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ 18 ಪೈಸೆ ಕುಸಿತ ಕಂಡು 49.98ರೂ.ಗಳಿಗೆ ತಲುಪಿದೆ. ಏಷ್ಯಾ ಶೇರುಪೇಟೆಗಳ ದುರ್ಬಲ ವಹಿವಾಟಿನಿಂದಾಗಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗುವ ನಿರೀಕ್ಷೆಯಿಂದಾಗಿ ದೇಶಿಯ ಕರೆನ್ಸಿ ಎದುರಕಿಗೆ ಡಾಲರ್ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್ಗಳು ತಿಳಿಸಿದ್ದಾರೆ. |