ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ದ್ವಿಚಕ್ರ ವಾಹನ ಮಾರಾಟದಲ್ಲಿ ಏರಿಕೆ: ಹೊಂಡಾ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದ್ವಿಚಕ್ರ ವಾಹನ ಮಾರಾಟದಲ್ಲಿ ಏರಿಕೆ: ಹೊಂಡಾ
ದೇಶದ ನಂಬರ್ ದ್ವಿಚಕ್ರ ವಾಹನ ತಯಾರಿಕೆ ಕಂಪೆನಿಯಾದ ಹೀರೊ ಹೊಂಡಾ ಮೋಟಾರ್ಸ್ ಲಿಮಿಟೆಡ್, ಏಪ್ರಿಲ್ ತಿಂಗಳ ಅವಧಿಯಲ್ಲಿ ಮಾರಾಟದಲ್ಲಿ ಶೇ.30 ರಷ್ಟು ಹೆಚ್ಚಳವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ವರ್ಷದ ಏಪ್ರಿಲ್ ತಿಂಗಳಲ್ಲಿ 2,86,252 ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿತ್ತು. ಪ್ರಸಕ್ತ ವರ್ಷದ ಏಪ್ರಿಲ್ ತಿಂಗಳಲ್ಲಿ 3,70,575 ದ್ವಿಚಕ್ರವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸವಾಲಿನ ಪರಿಸ್ಥಿತಿಯಲ್ಲಿ ಕೂಡಾ ನಿರಂತರ ಮಾರಾಟದಲ್ಲಿ ಏರಿಕೆ ಕಾಣುತ್ತಿದೆ ಎಂದು ಹೀರೊ ಹೊಂಡಾ ಮೋಟಾರ್ಸ್ ಲಿಮಿಟೆಡ್‌ನ ಹಿರಿಯ ಉಪಾಧ್ಯಕ್ಷ ಅನಿಲ್ ದುವಾ ಹೇಳಿದ್ದಾರೆ.

ಪ್ರಸಕ್ತ ವರ್ಷದ ಕೇವಲ ನಾಲ್ಕು ತಿಂಗಳುಗಳಲ್ಲಿ ವಾಹನಗಳ ಮಾರಾಟದಿಂದಾಗಿ ಆರ್ಥಿಕ ಸಂಗ್ರಹ 12,356.88 ಕೋಟಿ ರೂಪಾಯಿಗಳಿಗೆ ತಲುಪಿದೆ. ಕಳೆದ ವರ್ಷ10,364.54 ಕೋಟಿ ರೂಪಾಯಿಗಳಾಗಿತ್ತು ಎಂದು ಅನಿಲ್ ದುವಾ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
350 ಸತ್ಯಂ ಉದ್ಯೋಗಿಗಳು ವಜಾ?
ಹೀರೊ ಹೊಂಡಾ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಏರಿಕೆ
ಹಣದುಬ್ಬರ ದರ ಶೇ.0.57ಕ್ಕೆ ಏರಿಕೆ
ಅರ್ಸೆಲರ್‌ ಮಿತ್ತಲ್‌ನಿಂದ ವೆಚ್ಚ ಕಡಿತ ಘೋಷಣೆ
ಎರಿಕ್ಸನ್ ನಿವ್ವಳ ಲಾಭದಲ್ಲಿ ಶೇ.35 ರಷ್ಟು ಕುಸಿತ
ತೈಲ ಕಂಪೆನಿಗಳಿಂದ ದರ ಇಳಿಕೆ