ಭಾರತದ ಮುಂಚೂಣಿಯ ಐಟಿ ಕಂಪನಿ ಇನ್ಫೋಸಿಸ್ ಟೆಕ್ನಾಲಜೀಸ್ನ ಹೆಚ್ಚುವರಿ ನಿರ್ದೇಶಕರಾಗಿ ಐಸಿಐಸಿಐ ಬ್ಯಾಂಕಿನ ಮುಖ್ಯಸ್ಥರಾಗಿದ್ದ ಕುಂದಾಪುರ ಮೂಲದ ವಾಮನ ಕಾಮತ್ ಅವರನ್ನು ನೇಮಕ ಮಾಡಲಾಗಿದೆ. ಕಂಪನಿಯ ಕಾರ್ಯಕಾರಿ ಮಂಡಳಿಯು ಈ ಬಗ್ಗೆ ನಿರ್ಧಾರ ಕೈಗೊಂಡಿದೆ. ಜೂನ್ ತಿಂಗಳಲ್ಲಿ ನಡೆಯುವ ಇನ್ಫೋಸಿಸ್ ವಾರ್ಷಿಕ ಮಹಾಸಭೆಯಲ್ಲಿ ಕಾಮತ್ ಅವರನ್ನು ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ನೇಮಿಸುವ ಸಾಧ್ಯತೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದೆಂದು ಸಹ ಕಂಪೆನಿ ಪ್ರಕಟನೆಯಲ್ಲಿ ತಿಳಿಸಿದೆ. |