ಜಾಗತಿಕ ಮಾರುಕಟ್ಟೆಗಳ ಸ್ಥಿರತೆಯಿಂದಾಗಿ ಚಿನ್ನ ಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ ದೇಶದ ಚಿನಿವಾರಪೇಟೆಯಲ್ಲಿ ಚಿನ್ನದ ದರ ಶೇ.0.28 ರಷ್ಟು ಏರಿಕೆ ಕಂಡಿದೆ.
ಚಿನಿವಾರಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಚಿನ್ನದ ದರ ಶೇ.0.28 ರಷ್ಟು ಏರಿಕೆಯಾಗಿ ಪ್ರತಿ 10 ಗ್ರಾಂಗೆ 14,477 ರೂಪಾಯಿಗಳಿಗೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಯಲ್ಲಿ ಚಿನ್ನದ ಖರೀದಿಯಲ್ಲಿ ಹೆಚ್ಚಳ, ಮದುವೆ ಸೀಸನ್ ಹಾಗೂ ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ಚಿನ್ನದ ದರ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |