ದೇಶಿಯ ಶೇರುಪೇಟೆಯ ಚೇತರಿಕೆಯಿಂದಾಗಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 24 ಪೈಸೆ ಏರಿಕೆ ಕಂಡಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 49.38 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 24 ಪೈಸೆ ಏರಿಕೆ ಕಂಡು 49.61/62 ರೂಪಾಯಿಗಳಿಗೆ ತಲುಪಿದೆ.
ದೇಶಿಯ ಶೇರುಪೇಟೆ ಚೇತರಿಸಿಕೊಂಡಿದ್ದರಿಂದ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಕುಸಿತದಿಂದಾಗಿ ರೂಪಾಯಿ ಮೌಲ್ಯ ಚೇತರಿಕೆಗೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್ಗಳು ತಿಳಿಸಿದ್ದಾರೆ. |