ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್: ರೂಪಾಯಿ ಮೌಲ್ಯ ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್: ರೂಪಾಯಿ ಮೌಲ್ಯ ಕುಸಿತ
ಮಾಸಾಂತ್ಯದ ಹಿನ್ನೆಲೆಯಲ್ಲಿ ಅಮುದು ಹಾಗೂ ತೈಲ ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಏರಿಕೆ ಹಾಗೂ ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗುವ ನಿರೀಕ್ಷೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 36 ಪೈಸೆ ಕುಸಿತ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್‌ಗೆ 48.36 ರೂಪಾಯಿಗಳಿಗೆ ತಲುಪಿ ಮುಕ್ತಾಯವಾಗಿತ್ತು.ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 36 ಪೈಸೆ ಕುಸಿತ ಕಂಡಿದ್ದರಿಂದ ಡಾಲರ್‌ಗೆ 48.06 ರೂಪಾಯಿಗಳಿಗೆ ತಲುಪಿದೆ.

ಬುಧವಾರದ ವಹಿವಾಟಿನಲ್ಲಿ ಡಾಲರ್‌ ಎದುರಿನಲ್ಲಿ ರೂಪಾಯಿ ಮೌಲ್ಯ 22 ಪೈಸೆ ಕುಸಿತ ಕಂಡಿತ್ತು.

ತಿಂಗಳ ಕೊನೆಯ ವಾರವಾದ ಹಿನ್ನೆಲೆಯಲ್ಲಿ ಅಮುದು ಹಾಗೂ ತೈಲ ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಏರಿಕೆ ಹಾಗೂ ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗುವ ನಿರೀಕ್ಷೆಯಲ್ಲಿ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮುಂಬೈ ಶೇರುಪೇಟೆಯ ಬಿಎಸ್‌ಇ ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 520.41 ಪಾಯಿಂಟ್‌ಗಳ ಏರಿಕೆ ಕಂಡು 14,109.64 ಅಂಕಗಳಿಗೆ ತಲುಪಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಎಂಆರ್‌ಪಿಎಲ್‌ಗೆ 607.62 ಕೋಟಿ ನಿವ್ವಳ ಲಾಭ
ಹಂದಿಜ್ವರ ಔಷಧಿ ಮೇಲಿನ ಆಮದು ತೆರಿಗೆ ರದ್ದು
ಸತ್ಯಂ ರಾಜು ಬಂಧನದ ಆವಧಿ ಜೂನ್ 10 ರವರೆಗೆ ವಿಸ್ತರಣೆ
ಮೊಬೈಲ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಿ: ಕಿಂಗ್‌ಫಿಶರ್
ಬ್ಯಾಂಕ್‌ಗಳಿಂದ ಮತ್ತಷ್ಟು ಬಡ್ಡಿ ದರ ಕಡಿತ ಸಾಧ್ಯತೆ?
ಆರ್ಥಿಕಾಭಿವೃದ್ಧಿಗೆ ಪ್ರಥಮ ಆದ್ಯತೆ: ಪ್ರಣಬ್