ಅಮುದು ವಹಿವಾಟುದಾರರು ಹಾಗೂ ಬ್ಯಾಂಕ್ಗಳಿಂದ ಡಾಲರ್ ಬೇಡಿಕೆಯಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 17 ಪೈಸೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 6 ಪೈಸೆ ಕುಸಿತ ಕಂಡು 47.07/08 ರೂಪಾಯಿಗಳಿಗೆ ತಲುಪಿತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 17 ಪೈಸೆ ಕುಸಿತ ಕಂಡು 47.24 ರೂಪಾಯಿಗಳಿಗೆ ತಲುಪಿದೆ.
ಏಷ್ಯಾ ಮಾರುಕಟ್ಟೆಗಳ ವಹಿವಾಟು ದುರ್ಬಲಗೊಳ್ಳುವ ನಿರೀಕ್ಷೆಯಲ್ಲಿ ಡಾಲರ್ ಇತರ ಕರೆನ್ಸಿಗಳ ಎದುರು ಬಲವಾಗಿದ್ದರಿಂದ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್ಗಳು ತಿಳಿಸಿದ್ದಾರೆ.
ಏಷ್ಯಾ ಮಾರುಕಟ್ಟೆಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.5 ರಷ್ಟು ಕುಸಿತದೊಂದಿಗೆ ಆರಂಭಗೊಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. |