ಏಷ್ಯಾ ಶೇರುಪೇಟೆಗಳ ದುರ್ಬಲ ವಹಿವಾಟು ಹಾಗೂ ಬ್ಯಾಂಕ್ಗಳ ಡಾಲರ್ ಮಾರಾಟದಿಂದಾಗಿ ಮಾರುಕಟ್ಟೆಯ ಆರಂಭಿಕ ವಹಿವಾಟಿನಲ್ಲಿ 18 ಪೈಸೆ ಕುಸಿತ ಕಂಡಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ವಹಿವಾಟಿನ ಮುಕ್ತಾಯಕ್ಕೆ 9 ಪೈಸೆ ಏರಿಕೆ ಕಂಡು 47.11 ರೂಪಾಯಿಗಳಿಗೆ ತಲುಪಿ ಮುಕ್ತಾಯವಾಗಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 18 ಪೈಸೆ ಕುಸಿತ ಕಂಡು 47.29 ರೂಪಾಯಿಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಬ್ಯಾಂಕ್ಗಳು ಡಾಲರ್ಗಳ ಮಾರಾಟದಲ್ಲಿ ತೊಡಗಿರುವುದು ಹಾಗೂ ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ವಿದೇಶಿ ಡೀಲರ್ಗಳು ಹೇಳಿದ್ದಾರೆ. |