ಜಾಗತಿಕ ಆರ್ಥಿಕ ಬಿಕ್ಕಟ್ಟು ಆಳವಾಗುತ್ತಿರುವಂತೆ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಬಿಕ್ಕಟ್ಟನ್ನು ಎದುರಿಸಲು ಮಲೇಷಿಯಾದಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳ ಮುಖ್ಯಸ್ಥರ ಸಭೆಯನ್ನು ಆಯೋಜಿಸಲಾಗಿದ್ದು ಸಭೆಯಲ್ಲಿ ಬಿಕ್ಕಟ್ಟಿನ ಕುರಿತಂತೆ ಚರ್ಚಿಸಲಾಗುತ್ತಿದೆ ಎಂದು ವಿಮಾನಯಾನ ಸಂಸ್ಥೆಗಳ ಮೂಲಗಳು ತಿಳಿಸಿವೆ ಕೌಲಾಲಂಪುರ್ನಲ್ಲಿ ನಡೆಯುತ್ತಿರುವ ಇಂಟರ್ನ್ಯಾಷನಲ್ ಏರ್ಟ್ರಾನ್ಸ್ಪೋರ್ಟ್ ಅಸೋಸಿಯೇಶನ್ನ ಎರಡು ದಿನಗಳ ವಾರ್ಷಿಕ ಸಭೆಯಲ್ಲಿ ಸುಮಾರು 500ಕ್ಕೂ ಹೆಚ್ಚಿನ ವಿಮಾನಯಾನ ಸಂಸ್ಥೆಗಳ ಉನ್ನತ ಅಧಿಕಾರಿಗಳು ಭಾಗವಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ.3.1 ರಷ್ಟು ಕುಸಿತ ಕಂಡಿದ್ದು,ಸರಕು ಸಾಗಾಣೆಯಲ್ಲಿ ಶೇ.21.7 ರಷ್ಟು ಕುಸಿತ ಕಂಡಿದೆ ಎಂದು ಇಂಟರ್ನ್ಯಾಷನಲ್ ಏರ್ಟ್ರಾನ್ಸ್ಪೋರ್ಟ್ ಅಸೋಸಿಯೇಶನ್ ತಿಳಿಸಿದೆ.
ಪ್ರಯಾಣಿಕರ ಸಂಖ್ಯೆ ಇಳಿಮುಖವಾಗುತ್ತಿದ್ದು, ಅರುತ್ತಿರುವ ಇಂಧನ ದರವೂ ಕೂಡಾ ವಿಮಾನಯಾನ ಸಂಸ್ಥೆಗಳ ಆರ್ಥಿಕ ನಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.
ಆರ್ಥಿಕ ಕುಸಿತದಿಂದಾಗಿ ಪ್ರತಿ ದಿನ ವಿಮಾನಯಾನ ಸಂಸ್ಥೆಗಳು ಹೊಸ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಇಂಟರ್ನ್ಯಾಷನಲ್ ಏರ್ಟ್ರಾನ್ಸ್ಪೋರ್ಟ್ ಅಸೋಸಿಯೇಶನ್ನ ಪ್ರಧಾನ ನಿರ್ದೇಶಕ ಗಿಯೊವನ್ನಿ ಬಿಸಿಗ್ನಿನಾನಿ ಆತಂಕ ವ್ಯಕ್ತಪಡಿಸಿದ್ದಾರೆ. |