ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ > ಫಾರೆಕ್ಸ್ : ರೂಪಾಯಿ ಮೌಲ್ಯದಲ್ಲಿ ಕುಸಿತ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಫಾರೆಕ್ಸ್ : ರೂಪಾಯಿ ಮೌಲ್ಯದಲ್ಲಿ ಕುಸಿತ
ಏಷ್ಯಾ ಕರೆನ್ಸಿಗಳ ದುರ್ಬಲ ವಹಿವಾಟು ಹಾಗೂ ಶೇರುಪೇಟೆಯ ಆರಂಭಿಕ ಕುಸಿತದಿಂದಾಗಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 9 ಪೈಸೆ ಕುಸಿತ ಕಂಡು 47.64 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 44 ಪೈಸೆ ಇಳಿಕೆಯಾಗಿ ಪ್ರತಿ ಡಾಲರ್‌ಗೆ 47.55/56 ರೂಪಾಯಿಗಳಿಗೆ ತಲುಪಿತ್ತು.

ಏಷ್ಯಾ ಕರೆನ್ಸಿಗಳ ದುರ್ಬಲ ವಹಿವಾಟಿನಿಂದಾಗಿ ಡಾಲರ್ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಶೇರುಪೇಟೆಯ ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 437.63 ಪಾಯಿಂಟ್‌ಗಳ ಕುಸಿತ ಕಂಡಿದ್ದು, ಏಷ್ಯಾ ಶೇರುಪೇಟೆಗಳ ದುರ್ಬಲ ವಹಿವಾಟಿನಿಂದಾಗಿ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿದೆ ಎಂದು ಹೂಡಿಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಏತನ್ಮಧ್ಯೆ , ಏಷ್ಯಾ ಮಾರುಕಟ್ಟೆಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.2 ರಷ್ಟು ಕುಸಿತ ಕಂಡಿವೆ ಎಂದು ಫಾರೆಕ್ಸ್ ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೆಂಗಳೂರಿಗೆ ಸಾರಸ್ವತ್ ಬ್ಯಾಂಕ್ ಶಾಖೆ
ಅಂಗಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ: ಮಮತಾ
ಆರ್ಥಿಕ ಕುಸಿತ: ವಿಮಾನ ಸಂಸ್ಥೆಗಳಿಗೆ 8 ಬಿಲಿಯನ್ ಡಾಲರ್ ನಷ್ಟ
ಬಜೆಟ್‌ನಲ್ಲಿ ಸೌಕರ್ಯ,ಸುರಕ್ಷತೆಗೆ ಆದ್ಯತೆ: ಮಮತಾ
ಕಾರು, ದ್ವಿಚಕ್ರವಾಹನಗಳ ಮಾರಾಟದಲ್ಲಿ ಏರಿಕೆ
ಮಲೇಷಿಯಾ : ವಿಮಾನಯಾನ ಸಂಸ್ಥೆಗಳ ಮುಖ್ಯಸ್ಥರ ಸಭೆ