ಸಾಗರೋತ್ತರ ಮಾರುಕಟ್ಟೆಗಳ ಕುಸಿತದ ಮಧ್ಯೆಯು ದೇಶಿಯ ಶೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ನಿರೀಕ್ಷೆಯಿಂದಾಗಿ ಡಾಲರ್ ಎದುರಿಗೆ ರೂಪಾಯಿ 21 ಪೈಸೆ ಏರಿಕೆ ಕಂಡಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ 21ಪೈಸೆ ಏರಿಕೆ ಕಂಡು 47.28 ರೂಪಾಯಿಗಳಿಗೆ ತಲುಪಿದೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 47.49 ರೂಪಾಯಿಗಳಿಗೆ ತಲುಪಿ ಮುಕ್ತಾಯವಾಗಿತ್ತು.
ಸಾಗರೋತ್ತರ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಏಷ್ಯಾ ಶೇರುಪೇಟೆಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಹೆಚ್ಚಳವಾಗುವ ನಿರೀಕ್ಷೆಯಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್ಗಳು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ದೇಶದ ಆರ್ಥಿಕ ಅಭಿವೃದ್ಧಿ ದರದಲ್ಲಿ ಏರಿಕೆಯಾಗಲಿದ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಇ ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 461.08 ಪಾಯಿಂಟ್ಗಳ ಏರಿಕೆಯಾಗಿ 15,127 ಅಂಕಗಳಿಗೆ ತಲುಪಿತ್ತು.
ಏತನ್ಮಧ್ಯೆ, ಹಾಂಗ್ಕಾಂಗ್ನ ಹಾಂಗ್ಸೆಂಗ್ ಸೇರುಪೇಟೆ ಶೇ.1 ರಷ್ಟು ಏರಿಕೆ ಕಂಡಿದ್ದು, ಜಪಾನ್ನ ನಿಕೈ ಶೇರುಪೇಟೆ ಶೇ.1.5 ರಷ್ಟು ಏರಿಕೆ ಕಂಡಿದೆ. |