ದೇಶದ ಸಾರ್ವಜನಿಕ ಕ್ಷೇತ್ರದ ನಂಬರ್ ಒನ್ ಸ್ಥಾನದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಸಕ್ತ ವರ್ಷದಲ್ಲಿ 13 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 2008-09 ರ ಅವಧಿಯಲ್ಲಿ 33,703 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಪ್ರಸಕ್ತ ವರ್ಷದಲ್ಲಿ 13ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬ್ಯಾಂಕ್ನ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.ನೂತನವಾಗಿ ನೇಮಕ ಮಾಡಿಕೊಳ್ಳುವ ಉದ್ಯೋಗಿಗಳಿಗೆ ಬ್ಯಾಂಕ್ನ ಠೇವಣಿ ಸಂಗ್ರಹ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಿಯುಕ್ತಿಗೊಳಿಸಲಾಗುವುದು. ಕಳೆದ ವರ್ಷ ದೇಶದಾದ್ಯಂತ 20 ಸಾವಿರ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಅಧಿಕಾರಿಗಳು , ಮಾರುಕಟ್ಟೆ ಮತ್ತು ಸಾಲ ವಸೂಲಾತಿ (ಗ್ರಾಮೀಣ) ಮತ್ತು ತಾಂತ್ರಿಕ ಅಧಿಕಾರಿಗಳು (ಕೃಷಿ ಕ್ಷೇತ್ರ) ಹುದ್ದೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಎಸ್ಬಿಐ ಮೂಲಗಳು ತಿಳಿಸಿವೆ. |