ದೇಶದಲ್ಲಿನ ಪಬ್ಲಿಕ್ ಸೆಕ್ಟರ್ ಬ್ಯಾಂಕ್ (ಪಿಎಸ್‌ಬಿ)ಗಳು ವಿಲೀನ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಕೇಂದ್ರ ಸರ್ಕಾರ ಮನವಿಮಾಡಿಕೊಂಡಿದೆ.
ಈ ವಿಲೀನ ಪ್ರಕ್ರಿಯೆಯಿಂದಾಗಿ ಬ್ಯಾಂಕ್ ಜಾಗತಿಕವಾಗಿ ಸ್ಪರ್ಧೆಯೊಡ್ಡಲು ಸಹಾಯಕವಾಗುತ್ತದೆ ಎಂದು ಕೇಂದ್ರ ವಿವರಿಸಿದೆ. ರಾಜ್ಯ ಒಡೆತನದ ಬ್ಯಾಂಕ್ಸ್ ಮತ್ತು ಆರ್ಥಿಕ ಸಂಸ್ಥೆಗಳ ಮುಖ್ಯಸ್ಥರ ಜತೆ ಕೇಂದ್ರ ವಿತ್ತ ಸಚಿವ ಪ್ರಣಬ್ ಮುಖರ್ಜಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ದೇಶದ ಪ್ರತಿಷ್ಠಿತ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಸಹವರ್ತಿ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ಚಾಲನೆಯಲ್ಲಿದೆ. ಅದರಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಾದ ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಮತ್ತು ಬ್ಯಾಂಕ್ ಆಫ್ ಇಂಡಿಯಾ ಕೂಡ ಸಮ್ಮತ ಸೂಚಿಸಿವೆ. |