ವಿದ್ಯುತ್ ಉತ್ಪಾದಿಸಿ ರಾಜ್ಯದ ಜನತೆಗೆ ಪೂರೈಸುತ್ತಿರುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ(ಕೆಪಿಸಿಎಲ್) ಇದೀಗ ಸೌರಶಕ್ತಿಯಿಂದ ವಿದ್ಯುತ್ ಉತ್ಪಾದಿಸಿ ರೈತರ ಪಂಪ್‌ಸೆಟ್‌ಗಳಿಗೆ ಪೂರೈಸುವ ಯೋಜನೆ ಕೈಗೆತ್ತಿಕೊಂಡಿದೆ.
ದೇಶದಲ್ಲಿ ಇದೇ ಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಇಟ್ನಾಳ್ ಗ್ರಾಮ ಮತ್ತು ರಾಯಚೂರಿನ ಯಾಪಲದಿನ್ನಿಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಡಿಸೆಂಬರ್‌ನಲ್ಲಿ ಘಟಕಗಳಿಗೆ ಶಿಲಾನ್ಯಾಸ ನೆರವೇರಲಿದೆ.
ಈ ಘಟಕಗಳು ತಲಾ 3ಮೆಗಾವ್ಯಾಟ್ ವಿದ್ಯುತ್ ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಲಿವೆ. ಇಲ್ಲಿ ಉತ್ಪಾದನೆ ಆಗುವ ವಿದ್ಯುತ್ ಅನ್ನು ಸ್ಥಳೀಯ ಗ್ರಾಮದ ಪಂಪ್‌ಸೆಟ್‌ಗಳು ಮತ್ತು ಹಿಟ್ಟಿನ ಗಿರಣಿ ಸೇರಿದಂತೆ ಮತ್ತಿಕೆರೆ ಕಡಿಮೆ ಸಾಮರ್ಥ್ಯದ ಮೋಟಾರ್ ಇರುವ ಯಂತ್ರಗಳಿಗೆ ಪೂರೈಕೆ ಮಾಡಲಾಗುತ್ತದೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಎಂ.ಜಾಮದಾರ ತಿಳಿಸಿದ್ದಾರೆ. |