ದೇಶಿಯ ಶೇರುಪೇಟೆಯ ಆರಂಭಿಕ ಕುಸಿತ ಸಾಧ್ಯತೆಯ ಹಿನ್ನೆಲೆಯಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗುವ ನಿರೀಕ್ಷೆಯಿಂದಾಗಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 16 ಪೈಸೆ ಕುಸಿತವಾಗಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 47.61/62 ರೂಪಾಯಿಗಳಿಗೆ ತಲುಪಿ ಮುಕ್ತಾಯವಾಗಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 16 ಪೈಸೆ ಕುಸಿತ ಕಂಡು 47.77ರೂಪಾಯಿಗಳಿಗೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ಏಷ್ಯಾ ಕರೆನ್ಸಿಗಳು ಮೌಲ್ಯದಲ್ಲಿ ಕುಸಿತವಾಗಿದ್ದರಿಂದ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.
ಮುಂಬೈ ಶೇರುಪೇಟೆ ಸೂಚ್ಯಂಕ ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ಶೇ.1.13 ರಷ್ಟು ಏರಿಕೆ ಕಂಡು 15.237.94 ಅಂಕಗಳಿಗೆ ತಲುಪಿತ್ತು. |