ತೈಲ ದರ ನಿರಂತರ ಏರಿಕೆ ಕಾಣುತ್ತಿರುವುದು ಕಳವಳ ಮೂಡಿಸಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಮುರಳಿ ದಿಯೋರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.ಕಳೆದ ವರ್ಷದ ಜುಲೈ ತಿಂಗಳಲ್ಲಿ ಪ್ರತಿ ಬ್ಯಾರೆಲ್‌ಗೆ 150 ಡಾಲರ್‌ವರೆಗೆ ಏರಿಕೆ ಕಂಡಿದ್ದ ತೈಲ ದರ ಪ್ರತಿ ಬ್ಯಾರೆಲ್‌ಗೆ 30 ಡಾಲರ್‌ವರೆಗೆ ಇಳಿಕೆ ಕಂಡಿತ್ತು ಎಂದು ತಿಳಿಸಿದ್ದಾರೆ. ಆರ್ಥಿಕತೆ ಚೇತರಿಸಿಕೊಳ್ಳುತ್ತಿದೆ ಎನ್ನುವ ನಿರೀಕ್ಷೆಯಲ್ಲಿ ತೈಲ ಬೇಡಿಕೆ ಹೆಚ್ಚಳವಾಗುತ್ತಿದ್ದಂತೆ ದರವು ಕೂಡಾ ನಿರಂತರ ಏರಿಕೆ ಕಂಡು ಅಮೆರಿಕದಲ್ಲಿ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ 70.90 ಡಾಲರ್ ಹಾಗೂ ಇಂಗ್ಲೆಂಡ್‌ನಲ್ಲಿ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್‌ಗೆ 69.85 ಡಾಲರ್‌ಗಳಿಗೆ ತಲುಪಿದೆ ಎಂದು ಸಚಿವ ಮುರಳಿ ತಿಳಿಸಿದ್ದಾರೆ. |