ರಸ್ತೆ ,ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಅಭಿವೃದ್ಧಿಗಾಗಿ ಪೆಟ್ರೋಲ್ ಮತ್ತು ಡೀಸೆಲ್‌ಗಳ ಮಾರಾಟದ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಕುರಿತಂತೆ ರೈಲ್ವೆ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕಮಲ್‌ನಾಥ್ ಹೇಳಿದ್ದಾರೆ.ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿ ಬಜೆಟ್‌ನಲ್ಲಿ ತಮ್ಮ ಖಾತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದ ಅವರು, ಮುಂಬರುವ ಬಜೆಟ್‌ನಲ್ಲಿ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಹಣವನ್ನು ಮೀಸಲಾಗಿಡಲಾಗುವುದು ಎಂದು ಹೇಳಿದ್ದಾರೆ.ಆರ್ಥಿಕ ಸಹಾಯಕ್ಕಾಗಿ ಪ್ರಸಕ್ತ ಬಜೆಟ್ ಹೊರತುಪಡಿಸಿ ಮುಂದಿನ ಬಜೆಟ್‌ನಲ್ಲಿ ಅವಕಾಶ ನೀಡಲಾಗುವುದು. ಮೂಲಸೌಕರ್ಯಗಳಿಗಾಗಿ ಹೆಚ್ಚಿನ ಆದ್ಯತೆ ನೀಡಿ ಕೇಂದ್ರ ಸರಕಾರ ಆರ್ಥಿಕ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಕೇಂದ್ರ ಸರಕಾರ ರಸ್ತೆ ಮತ್ತು ಹೆದ್ದಾರಿ ಅಭಿವೃದ್ಧಿ ಯೋಜನೆಗಳಿಗಾಗಿ ಪೆಟ್ರೋಲ್ ಮತ್ತು ಡೀಸೆಲ್‌ಗಳ ಮೇಲೆ 2 ರೂಪಾಯಿ ತೆರಿಗೆಯನ್ನು ವಿಧಿಸುತ್ತಿದ್ದು, ಪ್ರತಿನಿತ್ಯ 20 ಕಿ.ಮೀ. ಗುರಿಯನ್ನು ನಿಗದಿಪಡಿಸಬೇಕಾಗಿದೆ. ರಸ್ತೆ ಮೂಲಸೌಕರ್ಯಗಳಲ್ಲಿ ಒಂದಾಗಿದ್ದರಿಂದ ವೇಗವಾಗಿ ಅಭಿವೃದ್ಧಿಪಡಿಸಬೇಕಾಗಿದೆ ಎಂದು ಸಚಿವ ಕಮಲ್‌ನಾಥ್ ಅಭಿಪ್ರಾಯಪಟ್ಟಿದ್ದಾರೆ.ನ್ಯಾಷನಲ್ ಹೈವೆ ಅಥಾರಿಟಿ ಆಫ್ ಇಂಡಿಯಾಗೆ ಒದಗಿಸಲಾದ ಹಣಕಾಸಿನ ನೆರವನ್ನು ಸದುಪಯೋಗಪಡಿಸಿಕೊಳ್ಳಲು ವಿಫಲವಾಗಿದೆ ಎಂದು ಸಚಿವ ಕಮಲ್‌ನಾಥ್ ಆರೋಪಿಸಿದ್ದಾರೆ. |