ತೈಲ ಕಂಪೆನಿಗಳು ಹಾಗೂ ಅಮುದುದಾರರಿಂದ ಡಾಲರ್‌ಗಳ ಬೇಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 12 ಪೈಸೆ ಕುಸಿತ ಕಂಡಿದೆವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್‌ಗೆ 47.74 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 12 ಪೈಸೆ ಕುಸಿತ ಕಂಡು 47.86 ಪಾಯಿಂಟ್‌ಗಳಿಗೆ ತಲುಪಿದೆ. ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಡಾಲರ್ ಬೇಡಿಕೆಯಲ್ಲಿ ಏರಿಕೆಯಾಗಿದ್ದರಿಂದ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.ಮುಂಬೈ ಶೇರುಪೇಟೆಯ ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 82.39 ಪಾಯಿಂಟ್‌ಗಳ ಏರಿಕೆ ಕಂಡು 14,957.91 ಅಂಕಗಳಿಗೆ ತಲುಪಿತ್ತು. ಏತನ್ಮಧ್ಯೆ , ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಶೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಶೇ.1 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. |