ಜಾಗತಿಕ ಮಾರುಕಟ್ಟೆಗಳಲ್ಲಿ ಏಷ್ಯಾ ಕರೆನ್ಸಿಗಳ ಮೌಲ್ಯದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ 11 ಪೈಸೆ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಡಾಲರ್‌ಗೆ 48.13 ರೂಪಾಯಿಗಳಿಗೆ ತಲುಪಿತ್ತು. ಆದರೆ ಇಂದಿನ ಆರಂಭಿಕ ವಹಿವಾಟಿನಲ್ಲಿ 11 ಪೈಸೆ ಏರಿಕೆ ಕಂಡಿದ್ದರಿಂದ 48.02 ರೂಪಾಯಿಗಳಿಗೆ ತಲುಪಿದೆ.ಏಷ್ಯಾ ಕರೆನ್ಸಿಗಳು ಡಾಲರ್ ಎದುರಿಗೆ ಪ್ರಬಲವಾದ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ಅಭಿಪ್ರಾಯಪಟ್ಟಿದ್ದರೆ.ಆದಾಗ್ಯೂ , ಏಷ್ಯಾ ಮಾರುಕಟ್ಟೆಗಳಿಂದ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾಗಿದ್ದರೂ ರೂಪಾಯಿ ಮೌಲ್ಯ ಏರಿಕೆ ಕಂಡಿರುವುದು ಹೂಡಿಕೆದಾರರಲ್ಲಿ ತೃಪ್ತಿ ಮೂಡಿಸಿದೆ.ಬುಧವಾರದ ವಹಿವಾಟಿನ ಮುಕ್ತಾಯಕ್ಕೆ ಶೇರುಪೇಟೆಯ ಒಂದು ದಿನದ ಅವಧಿಯಲ್ಲಿ 435 ಪಾಯಿಂಟ್‌ಗಳ ಇಳಿಕೆ ಕಂಡಿರುವುದು ವರ್ಷದಲ್ಲಿ ನಾಲ್ಕನೇ ಬಾರಿಗೆ ಅತ್ಯಧಿಕ ಕುತಿ ಕಂಡಂತಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. |